
ಹಾಸನಾಂಬಾ ದೇವಾಲಯಕ್ಕೆ ಭೇಟಿ ನೀಡಿದ್ದ ಸಚಿವ ಕೆ.ಎಂ. ಶಿವಲಿಂಗೇಗೌಡರು, ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಭರ್ಜರಿ ಹೆಜ್ಜೆ ಹಾಕಿದ್ದಾರೆ.
‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಸಚಿವರು ಕುಣಿದು, ಭಕ್ತರ ಮೆಚ್ಚುಗೆಗೆ ಪಾತ್ರರಾದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಚಿವರು ದೇವಾಲಯದಲ್ಲಿ ಭಕ್ತರಿಗೆ ಕಲ್ಪಿಸಿರುವ ಸೌಲಭ್ಯಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.