
ಚಿಲ್ಲರೆ ಹಣದ ವಿಚಾರವಾಗಿ ಸಚಿವ ಬೈರತಿ ಸುರೇಶ್ ಅವರನ್ನು ಬಸ್ನಿಂದ ಇಳಿಯುವಂತೆ ಹೇಳಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬಿಎಂಟಿಸಿ ನಿರ್ವಾಹಕ ಟಿ.ಜಿ. ರಾಮಕೃಷ್ಣ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.
ನಿರ್ವಾಹಕ ರಾಮಕೃಷ್ಣ ಅವರು ಸಚಿವರನ್ನು ಭೇಟಿ ಮಾಡಿ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಸಚಿವರು ಈ ನಿರ್ದೇಶನ ನೀಡಿದ್ದಾರೆ.
ಸಚಿವರು ಎಲ್ಲಾ ಚಾಲಕರು ಮತ್ತು ನಿರ್ವಾಹಕರಿಗೆ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ದೂರುಗಳು ಬಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.