
ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಅಮೆರಿಕದ ಭೂಭಾಗ ಎಂದು ಘೋಷಿಸುವುದಾಗಿ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಜಗತ್ತಿನ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಶೇ. 20 ರಷ್ಟು ಭಾಗವು ಈ ಜಲಸಂಧಿಯ ಮೂಲಕವೇ ಸಾಗಣೆಯಾಗುತ್ತದೆ.
ಟ್ರಂಪ್ ಅವರ ಈ ಹೇಳಿಕೆಯನ್ನು ಇರಾನ್ನ ಉಪ ವಿದೇಶಾಂಗ ಸಚಿವ ಕಾಜೆಮ್ ಗರಿಬಾಬಾದಿ ತೀವ್ರವಾಗಿ ಖಂಡಿಸಿದ್ದು, ಜಲಸಂಧಿ ಇರಾನ್ಗೆ ಸೇರಿದ್ದು ಎಂದು ಸ್ಪಷ್ಟಪಡಿಸಿದ್ದಾರೆ.