
ಹಿಂದೂ ದೇವಾಲಯಗಳನ್ನು ಸರ್ಕಾರಿ ನಿಯಂತ್ರಣದಿಂದ ಮುಕ್ತಗೊಳಿಸಲು ವಿಶ್ವ ಹಿಂದೂ ಪರಿಷತ್ ರಾಮಜನ್ಮಭೂಮಿ ಹೋರಾಟದ ಮಾದರಿಯಲ್ಲಿ ಬೃಹತ್ ಜನಾಂದೋಲನ ರೂಪಿಸಲು ನಿರ್ಧರಿಸಿದೆ.
ದೇವಾಲಯಗಳು ಸ್ವತಂತ್ರಗೊಂಡರೆ ವರ್ಷಕ್ಕೆ ಕನಿಷ್ಠ 1 ಸಾವಿರ ಕೋಟಿ ರೂ. ಹಣವನ್ನು ಹಿಂದೂ ಸಮಾಜದ ಕಲ್ಯಾಣ ಕಾರ್ಯಗಳಿಗೆ ಬಳಸಬಹುದು ಎಂದು ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಅಯೋಧ್ಯೆ ಕಾಣಿಕೆ ಹಣ ಕಳವು ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆಗೆ ಒತ್ತಾಯಿಸಲಾಗಿದ್ದು, 2026ರ ಅಂತ್ಯದೊಳಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೂಲಕ ಶಿಕ್ಷೆಯಾಗುವ ನಿರೀಕ್ಷೆಯಿದೆ.