
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಉಪ್ಪಳೇಶ್ವರ ಗ್ರಾಮದಲ್ಲಿ ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಮಾಡುತ್ತಿದ್ದ ಜಾಲವನ್ನು ಶಿರಸಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಭೇದಿಸಿದ್ದಾರೆ.
ದಾಳಿ ವೇಳೆ ಶಂಕರ್ ಸಿದ್ದಿ ಮತ್ತು ನರಸಿಂಹ ಸಿದ್ದಿ ಎಂಬುವರನ್ನು ಬಂಧಿಸಿ, 15.748 ಕೆಜಿ ಪ್ಯಾಂಗೋಲಿನ್ ಚಿಪ್ಪು, 8 ಹುಲಿ ಉಗುರು, 12 ಚಿರತೆ ಉಗುರು ಸೇರಿದಂತೆ ಕೋಟ್ಯಂತರ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.