
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಶುಕ್ರವಾರ ಮುಂಜಾನೆ ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿವೆ.
ಈ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.