
ಕಬ್ಬಿಗೆ ಎಂಎಸ್ಪಿ ಮತ್ತು ದರ ನಿಗದಿಗೆ ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ರಸ್ತೆ ಮೇಲೆ ಮಲಗಿ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹಲವೆಡೆ ಬಸ್ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮುಂಜಾಗೃತಾ ಕ್ರಮವಾಗಿ ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.