ಮಹಿಳೆಯೊಬ್ಬರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ ಆರೋಪದಡಿ ಆರ್.ಆರ್. ನಗರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಎಂಟು ಮಂದಿಯ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ದೂರುದಾರರು ಮತ್ತು ಅವರ ಸಹೋದರಿಯನ್ನು ದೆಹಲಿಗೆ ಕರೆದೊಯ್ದು ಪ್ರಕರಣ ವಾಪಸ್ ಪಡೆಯುವಂತೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.
ಈ ಪ್ರಕರಣದಲ್ಲಿ ಮುನಿರತ್ನ ಅವರಲ್ಲದೆ ಕಿರಣ್ ನಾಯ್ದು, ಲೋಹಿತ್ ಗೌಡ, ಮಂಜುನಾಥ್, ಲಕ್ಷ್ಮಿ ಜಯರಾಮ್ ಹಾಗೂ ಮೂವರು ಪೊಲೀಸ್ ಅಧಿಕಾರಿಗಳು ಆರೋಪಿಗಳಾಗಿದ್ದಾರೆ.