
ಪಶ್ಚಿಮ ಬಂಗಾಳದ ಬರ್ಧಮಾನ್ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ (STF) ಜೈಶ್-ಎ-ಮೊಹಮ್ಮದ್ ಸಂಘಟನೆಯ ಹಮೀದ್ ಮಂಡಲ್ ಎಂಬ ಉಗ್ರನನ್ನು ಬಂಧಿಸಿದೆ.
ಬಂಧಿತ ಉಗ್ರನು ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದನೆಂದು ಪೊಲೀಸರು ಶಂಕಿಸಿದ್ದಾರೆ.
ನಲ್ಹತಿ ಪ್ರದೇಶದಲ್ಲಿ ನಡೆಸಿದ ದಾಳಿಯಲ್ಲಿ 800 ಕೆಜಿಗೂ ಹೆಚ್ಚು ಅಮೋನಿಯಂ ನೈಟ್ರೇಟ್ ಮತ್ತು 1,200ಕ್ಕೂ ಹೆಚ್ಚು ಜೆಲಾಟಿನ್ ಸ್ಟಿಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.