
ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆಗಾಗಿ ಕರ್ನಾಟಕ ಹೈಕೋರ್ಟ್ ಆದೇಶಿಸಿದ ಎಸ್ಐಟಿ ರಚನೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹೈಕೋರ್ಟ್ ಆದೇಶದಂತೆ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐವರು ಅಧಿಕಾರಿಗಳ ಎಸ್ಐಟಿ ರಚಿಸಲಾಗಿದ್ದು, 100 ದಿನಗಳಲ್ಲಿ ವರದಿ ನೀಡಲು ಸೂಚಿಸಲಾಗಿದೆ.
ಸಿಐಡಿ ಈಗಾಗಲೇ ಶೇ 80ರಷ್ಟು ತನಿಖೆ ಪೂರ್ಣಗೊಳಿಸಿದ್ದು, ಹೊಸ ಎಸ್ಐಟಿ ರಚನೆಯ ಅಗತ್ಯವೇನು ಎಂದು ಸರ್ಕಾರ ಪ್ರಶ್ನಿಸಿದೆ.