
ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲು ಶಿಕ್ಷೆ ಎದುರಿಸುತ್ತಿದ್ದ ನಟ ರಾಜ್‌ಪಾಲ್ ಯಾದವ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ನ್ಯಾಯಾಲಯವು ಬುಧವಾರದೊಳಗೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ 5 ಕೋಟಿ ರೂಪಾಯಿ ಠೇವಣಿ ಇಡುವಂತೆ ನಟನಿಗೆ ಕಟ್ಟುನಿಟ್ಟಿನ ಷರತ್ತು ವಿಧಿಸಿದೆ.
ಈ ಪ್ರಕರಣವು ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ್ದು, ನಟ ಈಗಾಗಲೇ ದೂರುದಾರರಿಗೆ 2.25 ಕೋಟಿ ರೂಪಾಯಿ ಪಾವತಿಸಿರುವುದು ವಿಚಾರಣೆ ವೇಳೆ ಗಮನಕ್ಕೆ ಬಂದಿದೆ.