
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಬಸಾಪುರ ಭಾಗದ ಗುಡ್ಡಗಾಡು ಪ್ರದೇಶದಲ್ಲಿ ಹುಲಿ ಸಂಚರಿಸುತ್ತಿರುವುದು ಅರಣ್ಯ ಇಲಾಖೆಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಿಲ್ಲೆಯಲ್ಲಿ ಈ ಹಿಂದೆ ಚಿರತೆಗಳ ಹಾವಳಿ ಮಾತ್ರ ಇತ್ತು, ಆದರೆ ಇದೇ ಮೊದಲ ಬಾರಿಗೆ ಹುಲಿಯ ಹೆಜ್ಜೆಗುರುತು ಮತ್ತು ದೃಶ್ಯಗಳು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅರಣ್ಯ ಇಲಾಖೆಯು ಸ್ಥಳದಲ್ಲಿ ಬೀಡುಬಿಟ್ಟು ನಿಗಾ ವಹಿಸಿದ್ದು, ಸಾರ್ವಜನಿಕರು ಮತ್ತು ರೈತರು ನಿರ್ಜನ ಪ್ರದೇಶಗಳಿಗೆ ಒಬ್ಬಂಟಿಯಾಗಿ ತೆರಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.