
ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಪರಿಸ್ಥಿತಿ ನಿಭಾಯಿಸಲು ಸರ್ಕಾರ ₹635 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಜೂನ್ 1 ರಿಂದ ಆಗಸ್ಟ್ 26 ರವರೆಗೆ ರಾಜ್ಯದಲ್ಲಿ ಶೇ.30 ರಷ್ಟು ಮಳೆ ಕೊರತೆಯಾಗಿದ್ದು, 178 ತಾಲೂಕುಗಳಲ್ಲಿ ಮಣ್ಣಿನ ತೇವಾಂಶದ ತೀವ್ರ ಕೊರತೆ ಕಂಡುಬಂದಿದೆ.
ಸದ್ಯ 758 ಗ್ರಾಮಗಳಿಗೆ 149 ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದ್ದು, ಮುಂದಿನ ಬೇಸಿಗೆಯಲ್ಲಿ 2,059 ಗ್ರಾಮ ಪಂಚಾಯತ್ಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದೆ.