
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ಕೆಎಸ್ಆರ್ಟಿಸಿ ಬಸ್ ಟಿಪ್ಪರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಸಂಗಪ್ಪ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಗಂಗಾವತಿಯಿಂದ ಕೊಲ್ಹಾಪುರಕ್ಕೆ ಸಂಚರಿಸುತ್ತಿದ್ದ ಈ ಬಸ್ ರಸ್ತೆಯಲ್ಲಿ ನಿಂತಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದಿದ್ದು, ಬಸ್ನಲ್ಲಿದ್ದ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೂಡಲೇ ಸಂಕೇಶ್ವರ ಮತ್ತು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.