
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಡಿಶಾ ಮತ್ತು ಛತ್ತೀಸ್ಗಢ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಜಾರ್ಖಂಡ್ನಲ್ಲಿ ಸೆಪ್ಟೆಂಬರ್ 2ರವರೆಗೆ ಮಳೆ ಮುಂದುವರಿಯಲಿದೆ.
ತೆಲಂಗಾಣ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.