
ಚಾಮರಾಜನಗರದ ಹನೂರು ಅರಣ್ಯ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳ ಗುಂಡೇಟಿಗೆ ಮೂವರು ತಮಿಳು ಭಾಷಿಗರು ಬಲಿಯಾದ ಘಟನೆಯನ್ನು ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಖಂಡಿಸಿದ್ದಾರೆ.
ಮೃತಪಟ್ಟ ಆಂಟೋ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಅವರಿಂದ 34.25 ಕೆಜಿ ಜಿಂಕೆ ಮಾಂಸ ಮತ್ತು ಎರಡು ನಾಡಬಂದೂಕುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.
ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮತ್ತು ಮೃತರ ಕುಟುಂಬಗಳಿಗೆ ಸಹಾಯ ಮಾಡುವಂತೆ ಸಿಎಂ ವಿಜಯ್ ಒತ್ತಾಯಿಸಿದ್ದು, ಪ್ರಕರಣದ ಸತ್ಯಾಂಶಕ್ಕಾಗಿ ಮ್ಯಾಜಿಸ್ಟ್ರೇಟ್ ತನಿಖೆ ನಡೆಯಲಿದೆ.