
ಗ್ಲಾಸ್ಗೊದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ 5,000 ಮೀಟರ್ ಓಟದಲ್ಲಿ ಗುಲ್ವೀರ್ ಸಿಂಗ್ 13 ನಿಮಿಷ 24.95 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಗೆದ್ದಿದ್ದಾರೆ.
ಈ ಸಾಧನೆಯೊಂದಿಗೆ ಒಂದೇ ಆವೃತ್ತಿಯಲ್ಲಿ 5,000 ಮೀ. ಮತ್ತು 10,000 ಮೀ. ಓಟದಲ್ಲಿ ಪದಕ ಗೆದ್ದ ಭಾರತದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಎಂಬ ದಾಖಲೆಯನ್ನು ಗುಲ್ವೀರ್ ನಿರ್ಮಿಸಿದ್ದಾರೆ.
28 ವರ್ಷದ ಗುಲ್ವೀರ್ ಸಿಂಗ್ ಕಳೆದ ಮಂಗಳವಾರ ನಡೆದ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದರು.