
ರಾಯಚೂರಿನ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿನಿಯರು ಮೂಲಭೂತ ಸೌಲಭ್ಯಗಳ ಕೊರತೆ ಖಂಡಿಸಿ ಜಿಲ್ಲಾ ಎಸ್.ಟಿ ಕಲ್ಯಾಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಕಳೆದ ನಾಲ್ಕು ತಿಂಗಳಿಂದ ಸೋಪ್ ಕಿಟ್ ಮತ್ತು ಸ್ಯಾನಿಟರಿ ಪ್ಯಾಡ್ ವಿತರಿಸಿಲ್ಲ, ಅಲ್ಲದೆ ಕೊಳೆತ ತರಕಾರಿ ಬಳಸಿ ಅಡುಗೆ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ಹಾಸಿಗೆಗಳ ಕೊರತೆಯಿಂದ ನೆಲದ ಮೇಲೆ ಮಲಗುವ ಸ್ಥಿತಿ ನಿರ್ಮಾಣವಾಗಿದ್ದು, ಸಮಸ್ಯೆಗಳ ಬಗ್ಗೆ ವಾರ್ಡನ್ ಮತ್ತು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ ಎಂದು ದೂರಿದ್ದಾರೆ.