Education
ರಾಯಚೂರು ಹಾಸ್ಟೆಲ್ ಅವ್ಯವಸ್ಥೆ: ಅಧಿಕಾರಿಗಳ ಕಚೇರಿಗೆ ವಿದ್ಯಾರ್ಥಿನಿಯರ ಮುತ್ತಿಗೆ

ರಾಯಚೂರು ಹಾಸ್ಟೆಲ್ ಅವ್ಯವಸ್ಥೆ: ಅಧಿಕಾರಿಗಳ ಕಚೇರಿಗೆ ವಿದ್ಯಾರ್ಥಿನಿಯರ ಮುತ್ತಿಗೆ

tv9kannada2h
THE BRIEF
1

ರಾಯಚೂರಿನ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿನಿಯರು ಮೂಲಭೂತ ಸೌಲಭ್ಯಗಳ ಕೊರತೆ ಖಂಡಿಸಿ ಜಿಲ್ಲಾ ಎಸ್.ಟಿ ಕಲ್ಯಾಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

2

ಕಳೆದ ನಾಲ್ಕು ತಿಂಗಳಿಂದ ಸೋಪ್ ಕಿಟ್ ಮತ್ತು ಸ್ಯಾನಿಟರಿ ಪ್ಯಾಡ್ ವಿತರಿಸಿಲ್ಲ, ಅಲ್ಲದೆ ಕೊಳೆತ ತರಕಾರಿ ಬಳಸಿ ಅಡುಗೆ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

3

ಹಾಸಿಗೆಗಳ ಕೊರತೆಯಿಂದ ನೆಲದ ಮೇಲೆ ಮಲಗುವ ಸ್ಥಿತಿ ನಿರ್ಮಾಣವಾಗಿದ್ದು, ಸಮಸ್ಯೆಗಳ ಬಗ್ಗೆ ವಾರ್ಡನ್ ಮತ್ತು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ ಎಂದು ದೂರಿದ್ದಾರೆ.