
ಜಾತಿ ಆಧಾರಿತ ಮೀಸಲಾತಿ ರದ್ದುಪಡಿಸಿ ಆದಾಯ ಆಧಾರಿತ ಮೀಸಲಾತಿ ಜಾರಿಗೆ ತರಬೇಕೆಂದು ಆಗ್ರಹಿಸಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಮೀಸಲಾತಿ ಹಠಾವೋ ಆಂದೋಲನ’ದಡಿ ಪ್ರತಿಭಟನಾಕಾರರು ‘ಒಂದು ಕುಟುಂಬ, ಒಂದು ಮೀಸಲಾತಿ’ ನೀತಿ ಜಾರಿಗೆ ಮತ್ತು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಮರುಪರಿಶೀಲನೆಗೆ ಒತ್ತಾಯಿಸಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ದೆಹಲಿ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯ ಪಡೆ (ಆರ್ಎಎಫ್) ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿಭಟನಾಕಾರರು ಕೇಸರಿ ಧ್ವಜ ಹಿಡಿದು ಘೋಷಣೆ ಕೂಗಿದ್ದಾರೆ.