
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆಕಳ ಗ್ರಾಮದ ಸುತ್ತಮುತ್ತ ನಾಲ್ಕು ಹುಲಿಗಳು ಓಡಾಡುತ್ತಿರುವುದು ಡ್ರೋನ್ ಕ್ಯಾಮರಾದಲ್ಲಿ ಪತ್ತೆಯಾಗಿದೆ.
ಈ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆದಿದ್ದು, ನಿನ್ನೆ ಡೋರನಕಟ್ಟೆ ಕಾಲೋನಿಯಲ್ಲಿ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾಗಿದ್ದಾರೆ.
ಹುಲಿಗಳ ಚಲನವಲನದ ಮೇಲೆ ಡ್ರೋನ್ ಕ್ಯಾಮರಾ ಮೂಲಕ ನಿಗಾ ಇರಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಳನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.