
ಸಂಪುಟ ಪುನಾರಚನೆಯ ನಂತರ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಹಿಂದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನಕ್ಕೆ ತಮ್ಮ ಹೆಸರುಗಳನ್ನು ಸಿದ್ದರಾಮಯ್ಯ ಪ್ರಬಲವಾಗಿ ಶಿಫಾರಸು ಮಾಡಿಲ್ಲ ಎಂದು ನಂಬಿರುವ ಶಾಸಕರು, ಈ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಪಾತ್ರದ ಬಗ್ಗೆ ಚರ್ಚಿಸುತ್ತಿದ್ದಾರೆ.
ತೀವ್ರ ಬೇಸರಗೊಂಡಿರುವ ಹೆಚ್.ಸಿ. ಮಹದೇವಪ್ಪ ಅವರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.