
ಕರ್ನಾಟಕ ಸೈಬರ್ ಕಮಾಂಡ್ ಪೊಲೀಸರು ಮತ್ತು ದೂರಸಂಪರ್ಕ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಸಿಮ್ ಬಾಕ್ಸ್ ದಂಧೆ ಜಾಲವನ್ನು ಪತ್ತೆ ಮಾಡಿದೆ.
ಬೆಂಗಳೂರಿನ ಕಾಡುಗೋಡಿ ಮತ್ತು ಪಟ್ಟಂದೂರು ಅಗ್ರಹಾರದಲ್ಲಿ ಒಟ್ಟು 10 ಸಿಮ್ ಬಾಕ್ಸ್‌ಗಳನ್ನು ಪತ್ತೆ ಮಾಡಲಾಗಿದ್ದು, ಮಹಾರಾಷ್ಟ್ರದ ನಾಲ್ವರನ್ನು ಬಂಧಿಸಲಾಗಿದೆ.
ಈ ಅಕ್ರಮ ಜಾಲಕ್ಕೆ ಡಿಜಿಟಲ್ ಅರೆಸ್ಟ್ ಹಾಗೂ ಸೈಬರ್ ಹಣಕಾಸು ವಂಚನೆಗಳ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದೆ.