
ರಾಜ್ಯ ಸರ್ಕಾರವು ಆಡಳಿತಾತ್ಮಕ ಕಾರಣಗಳಿಗಾಗಿ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ.
ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಬೆಳಗಾವಿ ಆಯುಕ್ತರಾಗಿದ್ದ ಭೂಷಣ್ ಬೋರಸೆ ಅವರನ್ನು ನೇಮಕ ಮಾಡಲಾಗಿದೆ.
ಪದ್ಮಿನಿ ಸಾಹು ಅವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ಮತ್ತು ರೋಹನ್ ಜಗದೀಶ್ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗಿದೆ.