
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ವಿಕೆಟ್‌ಕೀಪರ್ ಬ್ಯಾಟರ್ ಇಶಾನ್ ಕಿಶನ್ ಬಲ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿ ಗಾಯಗೊಂಡಿದ್ದು, ಅವರನ್ನು ಎರಡನೇ ಪಂದ್ಯದಿಂದ ಹೊರಗಿಡಲಾಗಿದೆ.
ಇಶಾನ್ ಕಿಶನ್ ಬದಲಿಗೆ ಜಾರ್ಖಂಡ್‌ನ ಯುವ ವಿಕೆಟ್‌ಕೀಪರ್ ಬ್ಯಾಟರ್ ಕುಮಾರ್ ಕುಶಾಗ್ರ ಅವರನ್ನು ಮೊದಲ ಬಾರಿಗೆ ಭಾರತ ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಕುಶಾಗ್ರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 38 ಪಂದ್ಯಗಳಿಂದ 2,507 ರನ್ ಹಾಗೂ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 1,387 ರನ್ ಕಲೆಹಾಕಿದ್ದಾರೆ.