
ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಪೋಸ್ಟ್ ಅನ್ನು ಫೇಸ್ಬುಕ್ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ ಹಿನ್ನೆಲೆಯಲ್ಲಿ, ಮೆಟಾ ಸಂಸ್ಥೆಯ ಜಾಗತಿಕ ತಂಡಕ್ಕೆ ಕೇಂದ್ರ ಸರ್ಕಾರ ಸಮನ್ಸ್ ಜಾರಿ ಮಾಡಿದೆ.
ಅಲ್ಗಾರಿದಮ್ ಪಕ್ಷಪಾತ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಕುರಿತು ವಿಚಾರಣೆ ನಡೆಸಲು ಮೆಟಾ ತಂಡ ಮುಂದಿನ ವಾರ ದೆಹಲಿಗೆ ಆಗಮಿಸಲಿದ್ದು, ಸಂಸದೀಯ ಸಮಿತಿಯ ಮುಂದೆಯೂ ಹಾಜರಾಗಲಿದೆ.
ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಮೆಟಾ ಇಂಡಿಯಾ ಮುಖ್ಯಸ್ಥ ಅರುಣ್ ಶ್ರೀನಿವಾಸ್ ಸೇರಿದಂತೆ ಕೆಲವರ ವಿರುದ್ಧ ಎಐ ತಿರುಚಿದ ವಿಡಿಯೋ ಹಂಚಿಕೊಂಡ ಆರೋಪದಡಿ ಈಗಾಗಲೇ ಪ್ರಕರಣ ದಾಖಲಿಸಿದ್ದಾರೆ.