
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮುನ್ನ ಪೊಲೀಸರು ಕ್ರೈಸ್ಟ್ ಕಾಲೇಜು ಬಳಿ ತಡೆದಿದ್ದಾರೆ.
ಪಾದಯಾತ್ರೆ ತಡೆಯಲು ಪೊಲೀಸರು ರಸ್ತೆಗೆ ಬಸ್ ಅಡ್ಡಲಾಗಿ ನಿಲ್ಲಿಸಿದ್ದರಿಂದ ಜೆಡಿಎಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದು, ತಳ್ಳಾಟದ ವೇಳೆ ಎಸ್ಪಿ ಶ್ರೀನಿವಾಸ್ ಗೌಡ ಅವರ ಬೆರಳಿಗೆ ಗಾಯವಾಗಿದೆ.
ಹೆಜ್ಜಾಲ ಬಳಿ ಹಾಕಿದ್ದ ಬ್ಯಾರಿಕೇಡ್ಗಳನ್ನು ತಳ್ಳಿ ಪ್ರತಿಭಟನಾಕಾರರು ಮುನ್ನುಗ್ಗಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರಿ ಹೈಡ್ರಾಮಾ ನಡೆದಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.