
ನೈಋತ್ಯ ಮಾನ್ಸೂನ್ ಚುರುಕಾಗಿರುವುದರಿಂದ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದೂ ಕೂಡ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದ್ದು, ಕರಾವಳಿ ಭಾಗಗಳಲ್ಲಿ ಸಮುದ್ರ ಮತ್ತು ನದಿಗಳಿಗೆ ಇಳಿಯದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.