
ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಲ್ಯಾಟರಲ್ ಪ್ರವೇಶ ಪಡೆಯುವ ಡಿಪ್ಲೋಮಾ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿನ ಮೀಸಲಾತಿ ವಿವರಗಳನ್ನು ಆಗಸ್ಟ್ 11ರವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದು.
ಯುಜಿ ಸಿಇಟಿ ಮತ್ತು ಯುಜಿ ನೀಟ್ 2026ರ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಗಸ್ಟ್ 13ರವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶವಿದೆ.
ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಆಗಸ್ಟ್ 19ರಂದು ಪ್ರಕಟವಾಗಲಿದೆ.