
ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನವಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷದ ಸಂಸದರು ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾಕಾರರು ಅಣುಕು ಹುಂಡಿಯನ್ನು ಬಳಸಿ ಅದಕ್ಕೆ ಹಣ ಹಾಕುವ ಮೂಲಕ ತಮ್ಮ ವಿರೋಧವನ್ನು ಸಾಂಕೇತಿಕವಾಗಿ ಪ್ರದರ್ಶಿಸಿದ್ದಾರೆ.