
ಖನಿಜಗಳ ಮೇಲಿನ ತೆರಿಗೆ ಅಧಿಕಾರವನ್ನು ರಾಜ್ಯಗಳಿಂದ ಕಸಿದುಕೊಳ್ಳುವ ಖನಿಜ ತಿದ್ದುಪಡಿ ಮಸೂದೆ 2026 ಅನ್ನು ಹಿಂಪಡೆಯುವಂತೆ ಡಿಸಿಎಂ ಡಾ. ಜಿ. ಪರಮೇಶ್ವರ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಸಂವಿಧಾನದ ರಾಜ್ಯ ಪಟ್ಟಿಯ 49 ಮತ್ತು 50ನೇ ನಮೂದುಗಳ ಅಡಿಯಲ್ಲಿ ಖನಿಜಗಳ ಮೇಲಿನ ಆರ್ಥಿಕ ಅಧಿಕಾರ ರಾಜ್ಯಗಳಿಗೆ ಸೇರಿದ್ದು, 2024ರ ಸುಪ್ರೀಂ ಕೋರ್ಟ್ ತೀರ್ಪು ಇದನ್ನು ಎತ್ತಿಹಿಡಿದಿದೆ ಎಂದು ಉಲ್ಲೇಖಿಸಿದ್ದಾರೆ.
ಕೇಂದ್ರದ ಈ ಏಕಪಕ್ಷೀಯ ನಡೆ ರಾಜ್ಯಗಳ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತದೆ ಎಂದು ಆರೋಪಿಸಿರುವ ಪರಮೇಶ್ವರ್, ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸುವಂತೆ ಒತ್ತಾಯಿಸಿದ್ದಾರೆ.