
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಆಗಸ್ಟ್ 10 ಮತ್ತು 11ರಂದು ಕರಾವಳಿ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮಳೆ ತುಸು ಕಡಿಮೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗದ ಆಗುಂಬೆಯಲ್ಲಿ 9 ಸೆಂ.ಮೀ., ಶೃಂಗೇರಿಯಲ್ಲಿ 6 ಸೆಂ.ಮೀ. ಮತ್ತು ಬೆಳ್ತಂಗಡಿಯಲ್ಲಿ 5 ಸೆಂ.ಮೀ. ಮಳೆ ದಾಖಲಾಗಿದೆ.
ಜೂನ್ 1ರಿಂದ ಆಗಸ್ಟ್ 8ರವರೆಗೆ ರಾಜ್ಯದಲ್ಲಿ ಶೇ.22ರಷ್ಟು ಮಳೆ ಕೊರತೆಯಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಶೇ.90ರಷ್ಟು ಅತ್ಯಧಿಕ ಮಳೆ ಕೊರತೆ ಕಂಡುಬಂದಿದೆ.