
ಐಪಿಎಲ್ ಫ್ರಾಂಚೈಸಿಗಳು ಆಟಗಾರರ ರಿಟೆನ್ಷನ್ ಪಟ್ಟಿಯನ್ನು ಸಲ್ಲಿಸಲು ನೀಡಿದ್ದ ಗಡುವನ್ನು ನವೆಂಬರ್ 17ರವರೆಗೆ ವಿಸ್ತರಿಸಿ ಬಿಸಿಸಿಐ ನಿರ್ಧರಿಸಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ನವೆಂಬರ್ 15ರಂದೇ ನಡೆಯಲಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಡಿಸೆಂಬರ್ 16ರಂದು ಗೋವಾದಲ್ಲಿ ನಡೆಯಲಿರುವ ಐಪಿಎಲ್ ಮಿನಿ ಹರಾಜಿನ ದಿನಾಂಕ ಅಥವಾ ಸ್ಥಳದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.