
ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ಹಾಗೂ ಆತನ ಸ್ನೇಹಿತರು ಸಹಪಾಠಿ ಮನೀಶ್ ಗೌಡನನ್ನು ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಕಾರು ಓವರ್ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯ ನಂತರ, ಮನೀಶ್ನನ್ನು ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದು ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಸಾಮ್ರಾಟ್ ವಿಜಯ್ನನ್ನು ಎ-1 ಆರೋಪಿಯನ್ನಾಗಿ ಮಾಡಿ ಒಟ್ಟು 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.