
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಮಾಫಿ ಸಾಕ್ಷಿ ಪ್ರದೋಷ್ ನೀಡಿದ ಹೇಳಿಕೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವರ ವಿರುದ್ಧ ನಗರದ 59ನೇ ಸಿಸಿಹೆಚ್ ಕೋರ್ಟ್ ಗಂಭೀರ ಕ್ರಮ ಕೈಗೊಂಡಿದೆ.
ನ್ಯಾಯಾಲಯದ ಗೌಪ್ಯತೆಯನ್ನು ಉಲ್ಲಂಘಿಸಿ ಈ ವಿಡಿಯೋವನ್ನು ಸ್ಕ್ರೀನ್ ರೆಕಾರ್ಡ್ ಮಾಡಿ ಯೂಟ್ಯೂಬ್ ಹಾಗೂ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕೋರ್ಟ್ ತಿಳಿಸಿದೆ.
ವಿಡಿಯೋ ಹಂಚಿಕೊಂಡ ಸೋಷಿಯಲ್ ಮೀಡಿಯಾ ಖಾತೆಗಳು ಮತ್ತು ಯೂಟ್ಯೂಬರ್ಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ನಿರ್ದೇಶಿಸಿದೆ.