
ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಜನರಿಗೆ ಪರಿಹಾರ ದೊರಕಿಸಿಕೊಡಲು ದೆಹಲಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ ಸುಮಾರು 62 ಸಾವಿರ ಕೋಟಿ ರೂಪಾಯಿ ನಷ್ಟವಾಗಿದ್ದು, ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ಕೋರಲಾಗುವುದು.
ದಸರಾ ಉತ್ಸವ ಮುಕ್ತಾಯಗೊಂಡಿರುವುದರಿಂದ ಸರ್ವಪಕ್ಷ ಸಭೆ ನಡೆಸಿ ಕೇಂದ್ರದ ನಾಯಕರ ಭೇಟಿಗೆ ಸಮಯ ನಿಗದಿಪಡಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.