
ಕರ್ನಾಟಕದಲ್ಲಿ ಬರಪೀಡಿತ ತಾಲೂಕುಗಳನ್ನು ಹಂತ ಹಂತವಾಗಿ ಪರಿಶೀಲಿಸಿ ಘೋಷಿಸಲಾಗುತ್ತಿದ್ದು, ಪ್ರಸ್ತುತ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಘೋಷಿಸಲಾಗಿದೆ ಹಾಗೂ ಮುಂದಿನ ದಿನಗಳಲ್ಲಿ ಇನ್ನುಷ್ಟು ತಾಲೂಕುಗಳನ್ನು ಸೇರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಮೊದಲ ಹಂತದ 101 ತಾಲೂಕುಗಳಲ್ಲಿ ಸುಮಾರು 18,000 ಕೋಟಿ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಸುಮಾರು 3,500 ಕೋಟಿ ರೂಪಾಯಿ ಪರಿಹಾರ ಕೋರಲಾಗಿದೆ ಎಂದು ಅವರು ಹೇಳಿದರು.
ಬರ ಪರಿಸ್ಥಿತಿ ಮತ್ತು ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಕುರಿತು ಹಾಗೂ ವಿಪಕ್ಷಗಳ ಅಭಿಪ್ರಾಯ ಪಡೆಯಲು ಮೂರು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ ಎಂದು ತಿಳಿಸಿದರು.