
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕರಾವಳಿ ತೀರದಲ್ಲಿ ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ಗಾಳಿಯ ವೇಗ 30-40 ಕಿ.ಮೀ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.