Indian Politics
ಹೈಕೋರ್ಟ್ ಕಲಾಪಕ್ಕೆ ಅಡ್ಡಿ: ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ

ಹೈಕೋರ್ಟ್ ಕಲಾಪಕ್ಕೆ ಅಡ್ಡಿ: ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ

tv9kannada1h
THE BRIEF
1

ವಕೀಲರ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ ಬೆಂಗಳೂರಿನ ವಕೀಲರ ಸಂಘ ಪ್ರತಿಭಟನೆ ನಡೆಸಿದ ವೇಳೆ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು, ಹೈಕೋರ್ಟ್ ಅಪರಿಚಿತ ವ್ಯಕ್ತಿಗಳ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ.

2

ಸಿಜೆ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆಎಸ್ ಹೇಮಲೇಖಾ ಅವರ ವಿಭಾಗೀಯ ಪೀಠವು ಕಲಾಪಕ್ಕೆ ಅಡ್ಡಿಪಡಿಸಿದವರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವಂತೆ ರಿಜಿಸ್ಟ್ರಿಗೆ ಸೂಚಿಸಿದೆ.

3

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ಸಂಘಕ್ಕೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಿದೆ.