
ಶ್ರೀ ನಾರಾಯಣ ಗುರು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ತೆಗೆದು ಹಾಕಿದ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣವಾನಂದ ಸ್ವಾಮೀಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಧು ಬಂಗಾರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿರುವ ಸ್ವಾಮೀಜಿ, ಮುಂದಿನ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಅವರ ವಿರುದ್ಧ ತಾವೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಮಧು ಬಂಗಾರಪ್ಪ ಅವರು ತಮ್ಮ ವಿರುದ್ಧ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿರುವ ಸ್ವಾಮೀಜಿ, ನಾಳೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.