
ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆ.ಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 209 ರೂಪಾಯಿ ಇಳಿಕೆ ಮಾಡಿದ್ದು, ಹೊಸ ದರ 2,872 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂಪಾಯಿ ಇಳಿಕೆಯಾಗಿ 2,821 ರೂಪಾಯಿಗೆ ತಲುಪಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಕೊಂಚ ನಿರಾಳತೆ ಸಿಕ್ಕಿದೆ.
ಗೃಹ ಬಳಕೆಯ 14.2 ಕೆ.ಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲದೆ 942 ರೂಪಾಯಿಯಲ್ಲೇ ಮುಂದುವರಿದಿದೆ.