
ಚುನಾವಣಾ ಆಯೋಗದ ಇಬ್ಬರು ಸದಸ್ಯರು ಆಯೋಗದ ನಿರ್ಧಾರಗಳ ಬಗ್ಗೆ ಪದೇಪದೇ ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಆತಂಕಕಾರಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮತದಾರರ ಪಟ್ಟಿಯ ದತ್ತಾಂಶಗಳ ಕೇಂದ್ರೀಕರಣ ಮತ್ತು ಕಾನೂನುಬಾಹಿರವಾಗಿ ಫಾರ್ಮ್-6ರಲ್ಲಿ ಬದಲಾವಣೆ ತಂದಿರುವ ಬಗ್ಗೆ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಿಗೊಳಿಸಿ, ಅವರ ಕಾರ್ಯವೈಖರಿಯ ಬಗ್ಗೆ ತನಿಖೆ ನಡೆಸುವಂತೆ ಸಿದ್ದರಾಮಯ್ಯ ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.