
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಈ ಆದೇಶ ಆತಂಕ ತಂದಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಜುಲೈ ತಿಂಗಳಲ್ಲಿ ರಾಜ್ಯದಲ್ಲಿ ಶೇ.80 ರಿಂದ ಶೇ.90 ರಷ್ಟು ಮಳೆ ಕೊರತೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿರುವುದು ಸರ್ಕಾರದ ಮುಂದಿನ ಸವಾಲಾಗಿದೆ.