
ಬೆಂಗಳೂರಿನ ಕಿತ್ತಗನೂರಿನ ಯಲ್ಲಪ್ಪ ಗಾರ್ಡನ್‌ನಲ್ಲಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಪತಿ ಮುಬಾರಕ್ ಎಂಬುವವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆರೋಪದ ಮೇಲೆ ಆವಲಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪತ್ನಿ ಶಹೀನಾ ಬಾನು ಮತ್ತು ಪ್ರಿಯಕರ ನಯೀಮುದ್ದೀನ್ ಖುರೇಶಿ ನಡುವಿನ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ರಹಸ್ಯ ಬಯಲಾಗಿದೆ.
ಸೆಪ್ಟೆಂಬರ್ 9ರ ರಾತ್ರಿ ದಿಂಬಿನಿಂದ ಉಸಿರುಗಟ್ಟಿಸಿ ಕೊಂದ ಬಳಿಕ ಹೃದಯಾಘಾತದಿಂದ ಸಾವು ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿ ಶಹೀನಾ ಬಾನು, ಆಕೆಯ ತಾಯಿ ಹಸೀನಾ ಬಾನು ಹಾಗೂ ಪ್ರಿಯಕರ ಬಂಧಿತರಾಗಿದ್ದಾರೆ.