
ವಿಜಯಪುರ ಜಿಲ್ಲೆಯ ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ಸೇರಿಸದಿರಲು ಸಚಿವ ಎಂ.ಬಿ. ಪಾಟೀಲ್ ಕಾರಣ ಎಂದು ಶಾಸಕ ಸಿ.ಎಸ್. ನಾಡಗೌಡ ಆರೋಪಿಸಿದ್ದಾರೆ.
ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ. ಪಾಟೀಲ್, ಎಲ್ಲ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿರುವ ನಾಡಗೌಡ, ಆಗಸ್ಟ್ 5ರಿಂದ 7ರವರೆಗೆ ದೆಹಲಿ ಪ್ರವಾಸ ಕೈಗೊಂಡು ರೈತರ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದೇನೆ ಎಂದಿದ್ದಾರೆ.