
ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಸಿಐಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಮೂವರು ಅಭ್ಯರ್ಥಿಗಳು ಆರೋಪಿ ಬಸವರಾಜ್ ಕನ್ನಾಳೆಗೆ ಒಟ್ಟು 60 ಲಕ್ಷ ರೂಪಾಯಿ ನಗದು ನೀಡಿರುವುದು ತನಿಖೆಯಿಂದ ಬಯಲಾಗಿದೆ.
ವಿವಿಧ ಬ್ಯಾಂಕ್ ಖಾತೆಗಳಿಂದ ಸುಮಾರು 1.5 ಕೋಟಿ ರೂಪಾಯಿ ಹಣವನ್ನು ಸಿಐಡಿ ಜಪ್ತಿ ಮಾಡಿದ್ದು, ಪ್ರಕರಣದ ತನಿಖೆ ಈಗ ಎಸ್ಐಟಿ ತಂಡಕ್ಕೆ ಹಸ್ತಾಂತರಗೊಂಡಿದೆ.