
ಪಾಕಿಸ್ತಾನದ ರಾವಲ್ಪಿಂಡಿಯಲ್ಲಿರುವ ಸೇನಾ ಪ್ರಧಾನ ಕಚೇರಿಯ ಮುಖ್ಯ ದ್ವಾರದ ಬಳಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಭದ್ರತಾ ವಲಯಕ್ಕೆ ನುಗ್ಗಲು ಯತ್ನಿಸಿದ ದಾಳಿಕೋರನನ್ನು ಭದ್ರತಾ ಪಡೆಗಳು ಸ್ಥಳದಲ್ಲೇ ಹೊಡೆದುರುಳಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿವೆ.