
ಮೈಸೂರಿನಲ್ಲಿ ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಕಾರ್ತಿಕ್ ಎಂಬಾತನಿಗೆ ಪೋಕ್ಸೊ ವಿಶೇಷ ನ್ಯಾಯಾಲಯವು ಮರಣದಂಡನೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಬಾಲಕಿಯ ಕುಟುಂಬಕ್ಕೆ 13.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶ ಆನಂದ್ ಪಿ. ಹೊಗಾಡೆ ಅವರು ನಿರ್ದೇಶನ ನೀಡಿದ್ದಾರೆ.
ವಿಧಿವಿಜ್ಞಾನ ಪರೀಕ್ಷಾ ವರದಿ, ಡಿಎನ್ಎ ವರದಿ ಮತ್ತು ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಪರಿಗಣಿಸಿ ಈ ಶಿಕ್ಷೆಯನ್ನು ಪ್ರಕಟಿಸಿದೆ.