
ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಆಚರಣೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು 42 ತಾತ್ಕಾಲಿಕ ಕಲ್ಯಾಣಿಗಳು ಹಾಗೂ 659 ಸಂಚಾರಿ ಟ್ಯಾಂಕ್ಗಳನ್ನು ವಿಸರ್ಜನೆಗಾಗಿ ಸಿದ್ಧಪಡಿಸಿದೆ.
ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅನುಮತಿ ಪಡೆಯಲು 122 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ.
ಸುರಕ್ಷತೆಗಾಗಿ ನಗರಾದ್ಯಂತ ಹೆಚ್ಚುವರಿಯಾಗಿ 3,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು ಮತ್ತು ಡ್ರೋನ್ಗಳ ಮೂಲಕ ಕಣ್ಣಾವಲು ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.