
ಬೆಂಗಳೂರಿನ ಹೋಟೆಲ್ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಆಹಾರ ಸುರಕ್ಷತಾ ಇಲಾಖೆ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಮಾಂಸಾಹಾರವನ್ನು 4°Cಗಿಂತ ಕಡಿಮೆ ತಾಪಮಾನದಲ್ಲಿ ಮತ್ತು ಬೇಯಿಸಿದ ಆಹಾರವನ್ನು 75°C ತಾಪಮಾನದಲ್ಲಿ ನಿರ್ವಹಿಸಬೇಕು ಎಂದು ಇಲಾಖೆ ಆದೇಶಿಸಿದೆ.
ಇತ್ತೀಚಿನ ದಾಳಿಯಲ್ಲಿ 60ಕ್ಕೂ ಹೆಚ್ಚು ಸ್ಟಾರ್ ಹೋಟೆಲ್ಗಳಿಂದ 1,000 ಕೆಜಿಗೂ ಅಧಿಕ ಹಾಳಾದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎಫ್ಎಸ್ಎಸ್ಎಐ ಪ್ರಮಾಣಪತ್ರ ಪ್ರದರ್ಶನ ಕಡ್ಡಾಯಗೊಳಿಸಲಾಗಿದೆ.